16,051 ಕೋವಿಡ್ ಪ್ರಕರಣಗಳು ದೃಢ
ನವದೆಹಲಿ:ದೇಶದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಲ್ಲಿ ಭಾರೀ ಇಳಿಕೆ ಕಂಡುಬಂದಿದೆ.
24 ಗಂಟೆಗಳ ಅವಧಿಯಲ್ಲಿ 16,051 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 206 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ದೇಶದಲ್ಲಿ ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 2,02,131ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ.1.93ರಷ್ಟಿದೆ.
ಕೋವಿಡ್ ಚೇತರಿಕೆ ದರ ಶೇಕಡ 98.33ರಷ್ಟಿದೆ. ದೇಶದಲ್ಲಿ ಈವರೆಗೆ 5,12,109 ಮಂದಿ ಕೋವಿಡ್‌ನಿಂದ ಅಸುನೀಗಿದ್ದಾರೆ.
ಈವರೆಗೆ 175 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.