22,270 ಹೊಸ ಸೋಂಕು ಪ್ರಕರಣ ದೃಢ
ನವದೆಹಲಿ: ಓಮೈಕ್ರಾನ್ ಭೀತಿಯಿಂದಾಗಿ 3ನೇ ಅಲೆಯಲ್ಲಿರುವ ಭಾರತದಲ್ಲಿ ದಿನ ಕ್ರಮೇಣ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 22,270 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.
ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 22,270 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಇದೇ ಅವಧಿಯಲ್ಲಿ ಕೋವಿಡ್ ನಿಂದಾಗಿ 325 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,28,02,505ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,53,739 ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 60,298 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,20,37,536ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 175.03 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.