    : ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್‌; ಜಾಮೀನು ನೀಡಿದ ಸುಪ್ರೀಂ
ನವದೆಹಲಿ:ಅಬಕಾರಿ ನೀತಿ ಹಗರಣದಲ್ಲಿ (   ) ತಿಹಾರ್ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ( )‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಪುರಸ್ಕರಿಸಿದೆ(    ).
ಸೆ.5ರಂದು ಕೇಜ್ರಿವಾಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರ್ಯಕಾಂತ್‌ ಮತ್ತು ಉಜ್ಜಲ್‌ ಭುವನ್‌ ಇದ್ದ ನ್ಯಾಯಪೀಠ, ವಾದ ಪ್ರತಿವಾದಗಳನ್ನು ಅಲಿಸಿದ ಬಳಿಕ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಈ ಅರ್ಜಿಯ ತೀರ್ಪನ್ನು ಪ್ರಟಿಸಿದ್ದು, ಕೇಜ್ರಿವಾಲ್‌ಗೆ ಸಿಕ್ಕ ಬಿಗ್‌ ರಿಲೀಫ್‌ ಇದಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೇಜ್ರಿವಾಲ್‌ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗುವ ಉದ್ಧೇಶದಿಂದ ಮಧ್ಯಂತರ ಜಾಮೀನು ಪಡೆದ ಒಂದು ತಿಂಗಳ ಕಾಲ ಜೈಲಿನಿಂದ ಹೊರಬಂದಿದ್ದರು.
                          .          .../6LoZkISNO4
ಪ್ರಕರಣದಲ್ಲಿ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸುವ ಬದಲು ನೇರವಾಗಿ ಹೈಕೋರ್ಟ್‌ಗೆ ಕೇಜ್ರಿವಾಲ್‌ ಮೊರೆ ಹೋಗಿದ್ದರು. ಆದರೆ ಅವರ ಅರ್ಜಿ ತಿರಸ್ಕರಿಸಿದ ದಿಲ್ಲಿ ಹೈಕೋರ್ಟ್‌ ಸಿಬಿಐ ಬಂಧನ ಸರಿಯಾದ ಕ್ರಮ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಆಪ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು.
ಕೇಜ್ರಿವಾಲ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೇಜ್ರಿವಾಲ್, ವಿಚಾರಣಾ ನ್ಯಾಯಾಲಯವು ಬಂಧನದ ಸಮಯ ಸ್ವಲ್ಪ ಅಸಾಮಾನ್ಯವಾಗಿದೆ ಎಂದು ಉಲ್ಲೇಖಿಸಿದೆ. ಟ್ರಿಪಲ್ ಪರೀಕ್ಷೆಯನ್ನು ಸಂಪೂರ್ಣವಾಗಿ ಪೂರೈಸಲಾಗಿದೆ. ಕೇಜ್ರಿವಾಲ್‌ ಒಬ್ಬರನ್ನು ಹೊರತುಪೊಡಿಸಿ ಉಳಿದೆಲ್ಲಾ ಆರೋಪಿಗಳಾದ ಸಿಸೋಡಿಯಾ, ಕವಿತಾ, ಬುಚ್ಚಿ ಬಾಬುಗೆ ಜಾಮೀನು ಸಿಕ್ಕಿರುವುದು ವಿಪರ್ಯಾಸ ಎಂದಿದ್ದರು.
ಇದಕ್ಕೆ ತಿರುಗೇಟು ಕೊಟ್ಟ ಸಿಬಿಐ ಪರ ವಕೀಲ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಅರವಿಂದ್ ಕೇಜ್ರಿವಾಲ್ ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಪ್ರಮುಖ ರೂವಾರಿ. ಕೋವಿಡ್‌ ಸಂದರ್ಭದಲ್ಲಿ ಕೇಜ್ರಿವಾಲ್ ತರಾತುರಿಯಲ್ಲಿ ನೀತಿಯನ್ನು ಅನುಮೋದಿಸಿದ್ದರು ಎಂದು ವಾದಿಸಿದ್ದಾರೆ.
ಕೇಜ್ರಿವಾಲ್‌ ವಿರುದ್ಧ ಪ್ರಕರಣ ಏನು?
ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ
ಅಬಕಾರಿ ನೀತಿ ಹಗರಣದ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ತಂಡವು ಮಾರ್ಚ್ 21ರ ರಾತ್ರಿ 9 ಗಂಟೆ ವೇಳೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಸಿಬಿಐ ಮತ್ತು ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಬದಲಾಯಿಸಿದಾಗ ಅಕ್ರಮಗಳು ನಡೆದಿವೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯ ಅನುಕೂಲಗಳನ್ನು ವಿಸ್ತರಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ.
ಈ ಸುದ್ದಿಯನ್ನೂ ಓದಿ: : ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಸೆ.25ರವರೆಗೆ ವಿಸ್ತರಣೆ