ಗೋವಾ ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಇಂದು
ಪಣಜಿ:ಗೋವಾ ವಿಧಾನಸಭೆ ಚುನಾವಣೆಗೆ ವಾರದ ಅಂತರವಷ್ಟೇ ಇದ್ದು, ಆಡಳಿತಾರೂಢ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಪ್ರಮುಖ ನಾಯಕರನ್ನು ಪ್ರಚಾರಕ್ಕೆ ಕರೆತರುತ್ತಿದೆ.
40 ಸ್ಥಾನಗಳ ಗೋವಾ ವಿಧಾನಸಭೆಗೆ ಫೆ.14ರಂದು ಮತದಾನ ನಿಗದಿಯಾಗಿದೆ. ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ. ಮೋದಿ, ಅಮಿತ್‌ ಶಾ ಅವರೊಂದಿಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ ಹಾಗೂ ರಾಜ್‌ನಾಥ್‌ ಸಿಂಗ್‌ ಸೇರಿದಂತೆ ಹಲವು ಮುಖಂಡರು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಗೋವಾ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸದಾನಂದ ಶೇಟ್‌ ತಾನಾವಡೆ, ‘ಪಕ್ಷದ ಅಭ್ಯರ್ಥಿಗಳ ಪರ ವಾಗಿ ಪ್ರಧಾನಿ ಮೋದಿ ಅವರು ಫೆ.10ರಂದು ಮಾಪುಸಾದಲ್ಲಿ ಬೃಹತ್‌ ರ್‍ಯಾಲಿಯಲ್ಲಿ ಭಾಗಿಯಾಗಲಿದ್ದಾರೆ. ಕೇಂದ್ರ ಮತ್ತು ರಾಜ್ಯದ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಸೇರಲಿದ್ದಾರೆ.
ಪಣಜಿಯಲ್ಲಿ ನಿತಿನ್‌ ಗಡ್ಕರಿ ಅವರು ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ.  ರಾಜನಾಥ್‌ ಸಿಂಗ್‌ ಅವರು ಪೊಣ್ಡಾ ಮತ್ತು ವಾಸ್ಕೊ ದಲ್ಲಿ ಚುನಾವಣಾ ಸಭೆಗಳನ್ನು ನಡೆಸಲಿದ್ದಾರೆ.