ಕೇಂದ್ರ ಹಣಕಾಸು ಸಚಿವೆಯಿಂದ ಬಜೆಟ್ ಮಂಡನೆ ಆರಂಭ
ನವದೆಹಲಿ: ಸಂಸತ್ ನಲ್ಲಿ ಬಜೆಟ್ ಮಂಡನೆಯನ್ನು ಕೇಂದ್ರ ಹಣಕಾಸು ಸಚಿವೆ ಆರಂಭಿಸಿದ್ದಾರೆ.
ಏಪ್ರಿಲ್ 1ರಿಂದ ಪ್ರಾರಂಭವಾಗುವ ಮುಂದಿನ ಹಣಕಾಸು ವರ್ಷದ ಬಜೆಟ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (     ) ಅವರು ಇಂದು ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನ ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.20ಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಒಪ್ಪಿಗೆ ಪಡೆದರು.
ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಬಜೆಟ್ ಮಂಡನೆಗೆ ಅವಕಾಶ ನೀಡುತ್ತಿದ್ದಂತೆ, ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಇದೀಗ ಬಜೆಟ್ ಮಂಡನೆಯನ್ನು ಆರಂಭಿಸಿದ್ದಾರೆ.