3.47 ಲಕ್ಷ ಕೋವಿಡ್-19 ಪ್ರಕರಣಗಳು ದೃಢ
ನವದೆಹಲಿ: ಕಳೆದ24 ಗಂಟೆ ಅವಧಿಯಲ್ಲಿ ದೇಶದಾದ್ಯಂತ 3.47 ಲಕ್ಷ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 703 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ, ಸಕ್ರಿಯ ಪ್ರಕರಣಗಳ ಸಂಖ್ಯೆ 20,18,825ಕ್ಕೆ ಏರಿಕೆಯಾಗಿದೆ. ಈವರೆಗೆ 9,692 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.
ಗುರುವಾರಕ್ಕೆ ಹೋಲಿಸಿದರೆ ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆಯಲ್ಲಿ ಶುಕ್ರವಾರ ಶೇ 4.36ರ ಹೆಚ್ಚಳ ಕಂಡುಬಂದಿದೆ. 6.5 ಕೋಟಿ ಜನ ಕೋವಿಡ್ ಲಸಿಕೆಯ ಎರಡನೇ ಡೋಸ್ ಪಡೆದಿಲ್ಲ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.