ಕುಲ್ಗಾಂ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ
ಶ್ರೀನಗರ:ಇಬ್ಬರು ಉಗ್ರರು, ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದಾರೆ.
ಉಗ್ರರು ಕುಲ್ಗಾಂ ಜಿಲ್ಲೆಯ ಹಸನ್‌ಪೋರಾ ಗ್ರಾಮದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಚರಣೆ ಆರಂಭಿಸಿದ್ದವು.
ಶೋಧ ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಬಳಿಕ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹತ್ಯೆಯಾಗಿರುವ ಉಗ್ರರು ಯಾವ ಭಯೋತ್ಪಾದನಾ ಸಂಘಟನೆಗೆ ಸೇರಿದವರು ಎಂಬುದನ್ನು ಪತ್ತೆ ಹಚ್ಚಲಾಗುತ್ತಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.