58,097 ಹೊಸ ಪ್ರಕರಣಗಳು ಪತ್ತೆ, 534 ಮಂದಿ ಸಾವು
ನವದೆಹಲಿ:ಕರ್ನಾಟಕ ಸೇರಿದಂತೆ ದೇಶಾದ್ಯಂತ ಕೋವಿಡ್ ಸೋಂಕಿತರ ಸಂಖ್ಯೆ ಹೊಸ ವರ್ಷದ ನಂತರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 58,097 ಹೊಸ ಪ್ರಕರಣಗಳು ಪತ್ತೆಯಾಗಿದ್ದು 534 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 2,14,004ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 15 ಸಾವಿರದ 389 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,43,21,803ಕ್ಕೆ ತಲುಪಿದೆ. ಕರೋನಾದಿಂದ ಮೃತಪಟ್ಟವರ ಸಂಖ್ಯೆ 4 ಲಕ್ಷದ 82 ಸಾವಿರದ 551 ಆಗಿದೆ.
ಭಾರತದಲ್ಲಿ ಒಂದೇ 48,637 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೆ 68.38 ಕೋಟಿ ಜನರನ್ನು ಕರೋನಾ ಪರೀಕ್ಷೆಗೊಳ ಪಡಿಸಲಾಗಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 147.72 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.