 : ಕೇಂದ್ರದ ಆಯುಷ್ಮಾನ್ ಯೋಜನೆ ವಿಸ್ತರಣೆ; ಹಿರಿಯ ನಾಗರಿಕರಿಗೆ ಏನೇನು ಪ್ರಯೋಜನ?
ನವದೆಹಲಿ:ದೇಶದ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ( ) ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆಯು ಸುಮಾರು ಆರು ಕೋಟಿ ಹಿರಿಯ ನಾಗರಿಕರಿಗೆ ಪ್ರಯೋಜನವನ್ನು ನೀಡಲಿದೆ.
ಈ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್  ಮಾಹಿತಿ ನೀಡಿದ್ದು, ಹಿರಿಯ ನಾಗರಿಕರಿಗೆ ಆರೋಗ್ಯ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಅರ್ಹ ಫಲಾನುಭವಿಗಳು ಯೋಜನೆಯಡಿ ₹ 5 ಲಕ್ಷದವರೆಗೆ ರಕ್ಷಣೆಯನ್ನು ಪಡೆಯುತ್ತಾರೆ. ಈ ಯೋಜನೆಯು ಭಾರತದಲ್ಲಿ ಸುಮಾರು 4.5 ಕೋಟಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದ್ದಾರೆ.
  ,      ,            70                  ( -).    …../zsHyngZq4n
ಪ್ರಧಾನಿ ನರೇಂದ್ರ ಮೋದಿ ಅವರು  ನಲ್ಲಿ ಪೋಸ್ಟ್ ಮಾಡಿ ಯೋಜನೆಗೆ  ಶ್ಲಾಘಿನೆ ವ್ಯಕ್ತಪಡಿಸಿದ್ದಾರೆ. ʼಪ್ರತಿಯೊಬ್ಬ ಭಾರತೀಯನಿಗೆ ಪ್ರವೇಶಿಸಬಹುದಾದ, ಕೈಗೆಟುಕುವ ಮತ್ತು ಉತ್ತಮ ಗುಣಮಟ್ಟದ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಈ ಯೋಜನೆಯು ಆರು ಕೋಟಿ ನಾಗರಿಕರಿಗೆ ಘನತೆ, ಕಾಳಜಿ ಮತ್ತು ಭದ್ರತೆಯನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.
ಯೋಜನೆಯ ಬಗ್ಗೆ ಇಲ್ಲಿದೆ ಪ್ರಮುಖಾಂಶ
ಈ ಸುದ್ದಿಯನ್ನೂ ಓದಿ:ಆಯುಷ್ಮಾನ್‌ ಯೋಜನೆ ಲಾಭ: ಶ್ರವಣಶಕ್ತಿ ಪಡೆದ ಸುನಿತಾ