ಕೇಜ್ರಿವಾಲ್’ಗೆ ಕರೋನಾ ಸೋಂಕು ದೃಢ
ನವದೆಹಲಿ:ದಿಲ್ಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.
ನನಗೆ ಕೋವಿಡ್‌ 19 ಪಾಸಿಟಿವ್ ಪತ್ತೆಯಾಗಿದೆ. ಸೌಮ್ಯ ರೋಗಲಕ್ಷಣಗಳಿವೆ. ಮನೆಯಲ್ಲಿ ನನ್ನನ್ನು ನಾನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ನಿಮ್ಮನ್ನು ಪರೀಕ್ಷಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಪೋಸ್ಟ್ ಮಾಡಿದ್ದಾರೆ.
ಸೋಮವಾರ 24 ಗಂಟೆಗಳಲ್ಲಿ ದಿಲ್ಲಿಯಲ್ಲಿ 4,099 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿತ್ತು.