27,553 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆ
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 27,553 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 284 ಮಂದಿ ಮೃತಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಪ್ರಕರಣಗಳ ಒಟ್ಟು ಸಂಖ್ಯೆ 3,48,89,132ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಮೃತಪಟ್ಟವರ 4,81,770ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,22,801ಕ್ಕೆ ತಲುಪಿದೆ. ಚೇತರಿಸಿಕೊಂಡವರ ಸಂಖ್ಯೆ 3,42,84,561ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 10,82,376 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 68,00,71,486 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,45,44,13,005 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.