6,531 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 6,531 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆ ಯಾಗಿದೆ. ಕೋವಿಡ್ ನಿಂದ 315 ಮಂದಿ ಮೃತಪಟ್ಟಿ ದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಪ್ರಕರಣಗಳ ಒಟ್ಟು ಸಂಖ್ಯೆ 3,47,93,333ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತರ ಸಂಖ್ಯೆ 4,79,997 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 75,841ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 7,141 ಮಂದಿ ಗುಣಮುಖರಾಗುವುದರೊಂದಿಗೆ, ಚೇತರಿಸಿಕೊಂಡವರ ಸಂಖ್ಯೆ 3,42,37,495ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 7,52,935 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 67,29,36,621 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,41,70,25,654 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.