7,189 ನೂತನ ಕೋವಿಡ್ ಪ್ರಕರಣ ಪತ್ತೆ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 7,189 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ.
ಕೋವಿಡ್ ನಿಂದ 387 ಮಂದಿ ಮೃತಪಟ್ಟಿದ್ದಾರೆ ಎಂದು ಅಂಕಿಅಂಶದಲ್ಲಿ ವರದಿಯಾಗಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,47,79,815ಕ್ಕೆ ಏರಿಕೆಯಾಗಿದೆ. ಅಲ್ಲದೇ ಮೃತಪಟ್ಟವರ ಸಂಖ್ಯೆ 4,77,545ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 77,032ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 7,286 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,42,23,263ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 141.01 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.