ಆನ್ ಲೈನ್ ತರಗತಿಯಲ್ಲಿ ಮೊಬೈಲ್ ಫೋನ್ ಸ್ಫೋಟ
ಸಾತ್ನಾ:ಆನ್ ಲೈನ್ ತರಗತಿ ವೇಳೆ ಮೊಬೈಲ್ ಫೋನ್ ಸ್ಫೋಟಗೊಂಡು 15 ವರ್ಷದ ಬಾಲಕ ತೀವ್ರ ವಾಗಿ ಗಾಯಗೊಂಡಿದ್ದಾನೆ.
ಸಾತ್ನಾ ಜಿಲ್ಲಾ ಕೇಂದ್ರದಿಂದ 35 ಕಿಲೋ ಮೀಟರ್ ದೂರದಲ್ಲಿರುವ ಚಂದ್ ಕುಯಿಯಾ ಹಳ್ಳಿಯಲ್ಲಿ ಘಟನೆ ಸಂಭವಿಸಿದೆ.
8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ ರಾಮ್ ಪ್ರಕಾಶ್ ಬದೌರಿಯಾ, ಆನ್ ಲೈನ್ ತರಗತಿ ಯಲ್ಲಿದ್ದಾಗ ಇದ್ದಕ್ಕಿದ್ದಂತೆ ಮೊಬೈಲ್ ಫೋನ್ ಸ್ಫೋಟಗೊಂಡಿದೆ.
ಬಾಲಕನ ಪೋಷಕರು ಕೆಲಸಕ್ಕಾಗಿ ಮನೆಯಿಂದ ಹೊರಗೆ ಹೋಗಿದ್ದಾಗ ಆತ ಮನೆಯಲ್ಲಿ ಒಬ್ಬನೇ ಇದ್ದಾಗ ಈ ಘಟನೆ ಸಂಭವಿಸಿದೆ. ಸ್ಫೋಟದ ಶಬ್ದ ಕೇಳಿ ನೆರೆಹೊರೆಯವರು ಬಂದು ನೋಡಿದಾಗ ಮೊಬೈಲ್ ಸ್ಫೋಟಗೊಂಡಿರುವುದು ಕಂಡುಬಂದಿದೆ. ಗಾಯಾಳು ಬಾಲಕನಿಗೆ ಜಬಲ್ ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಸಾತ್ನಾದ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.