6,984 ಕರೋನಾ ಪ್ರಕರಣ ದೃಢ
ನವದೆಹಲಿ: ಭಾರತದಲ್ಲಿ ಬುಧವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 6,984 ಕರೋನಾ ಪ್ರಕರಣ ಗಳು ದೃಢಪಟ್ಟಿದೆ.
ಬುಧವಾರದ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,47,10,628ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,76,135ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 87,562ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 8,168 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,41,46,931ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 9,90,482 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 65,76,62,933 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,34,61,14,483 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.