ಅವಂತಿಪೋರಾ ಎನ್‌ಕೌಂಟರ್‌: ಭಯೋತ್ಪಾದಕನ ಹತ್ಯೆ
ಜಮ್ಮು-ಕಾಶ್ಮೀರ:ಅವಂತಿಪೋರಾ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಲ್ಲಿ ಒಬ್ಬ ಭಯೋತ್ಪಾದಕ ನನ್ನು ಕೊಲ್ಲಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಆವಂತಿಪೋರಾದ ಬರಗಾಮ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ ಕೌಂಟರ್‌ನಲ್ಲಿ ಒಬ್ಬ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅವಂತಿಪೋರಾದ ಬರಗಾಮ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆಯುತ್ತಿರುವ ಎನ್‌ ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕ ತಟಸ್ಥನಾಗಿದ್ದಾನೆ’ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಟ್ವೀಟ್‌ ಮಾಡಿದ್ದಾರೆ.