ಕರೋನಾ ಅಬ್ಬರ ಇಳಿಕೆ: 7,774 ಪ್ರಕರಣಗಳು ದೃಢ
ನವದೆಹಲಿ: ಭಾರತದಲ್ಲಿ ಕರೋನಾ ಅಬ್ಬರ ಇಳಿಕೆಯಾಗಿದೆ. ದೇಶದಲ್ಲಿ ಭಾನುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7,774 ಪ್ರಕರಣಗಳು ದೃಢಪಟ್ಟಿದ್ದು, 306 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,46,90,510ಕ್ಕೆ ತಲುಪಿದ್ದು, ಮೃತರ ಸಂಖ್ಯೆ 4,71,440ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92,281ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 8,464 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,41,22,795ಕ್ಕೆ ತಲುಪಿದೆ. ಭಾರತದಲ್ಲಿ ಒಂದೇ 11,89,459 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 65,58,16,759 ಮಂದಿ ಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಇಲ್ಲಿಯವರೆಗೂ ಒಟ್ಟಾರೆ 132.93 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.