6,822 ಕೋವಿಡ್ ಪ್ರಕರಣಗಳು ದೃಢ
ನವದೆಹಲಿ:24 ಗಂಟೆ ಅವಧಿಯಲ್ಲಿ ದೇಶದಾದ್ಯಂತ 6,822 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 220 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
10,004 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 95,014 ಸಕ್ರಿಯ ಪ್ರಕರಣಗಳಿದ್ದು, ಇದು 554 ದಿನಗಳಲ್ಲೇ ಕನಿಷ್ಠ ವಾಗಿದೆ.  ದೇಶದಾದ್ಯಂತ ಈವರೆಗೆ ಒಟ್ಟು 128.76 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.
ಈವರೆಗೆ ಒಟ್ಟು 23 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ ಸೋಮವಾರ ಎರಡು ಪ್ರಕರಣ ದೃಢಪಟ್ಟಿದ್ದು, ಒಟ್ಟು ಓಮೈಕ್ರಾನ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.