ಕರೋನಾ ಅಬ್ಬರ ಇಳಿಕೆ: 8 ಸಾವಿರದ 603 ಪ್ರಕರಣಗಳು ದೃಢ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆ ಗೊಂಡ 24 ತಾಸುಗಳ ಅವಧಿಯಲ್ಲಿ 8,603 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 415 ಮಂದಿ ಮೃತ ಪಟ್ಟಿದ್ದಾರೆಂದು ತಿಳಿದುಬಂದಿದೆ.
ಶನಿವಾರ ಸಾವಿನ ಸಂಖ್ಯೆ 4,70,530ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 8,190 ಮಂದಿ ಗುಣಮುಖರಾಗುವುದರೊಂದಿಗೆ, ಚೇತರಿಸಿಕೊಂಡವರ ಸಂಖ್ಯೆ 3,40,53,856ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,26,53,44,975 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.