9,283 ನೂತನ ಕೋವಿಡ್ ಪ್ರಕರಣ ಪತ್ತೆ
ನವದೆಹಲಿ:ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 9,283 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.
ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,45,35,763ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,11,481ಕ್ಕೆ ಇಳಿಕೆಯಾಗಿದೆ. 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 437 ಮಂದಿ ಮೃತಪಟ್ಟಿದ್ದಾರೆ. ದೇಶಾದ್ಯಂತ ಕೋವಿಡ್ ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,66,584ಕ್ಕೆ ತಲುಪಿದೆ.
47 ದಿನಗಳಿಂದ ದೇಶದಲ್ಲಿ ಸತತವಾಗಿ 20,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ವರದಿಯಾಗುತ್ತಿದೆ.