ಕರೋನಾ: 11,191 ಪ್ರಕರಣಗಳು ದೃಢ
ನವದೆಹಲಿ:ಭಾರತದಲ್ಲಿ ಕರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶುಕ್ರವಾರ 11,191 ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 459 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣ ಗಳ ಸಂಖ್ಯೆ ಇಳಿಮುಖವಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1,26,620ಕ್ಕೆ ತಲುಪಿದೆ. ಒಂದೇ ದಿನ 21,32,505 ಮಂದಿ ಯನ್ನು ಪರೀಕ್ಷೆಗೊಳಪಡಿಸಲಾಗಿದೆ.