ತಿರುಮಲ ಘಾಟ್ ರಸ್ತೆ ಅನಿರ್ದಿಷ್ಟಾವಧಿ ಬಂದ್: ವಿಮಾನ ಸಂಚಾರವೂ ರದ್ದು
ತಿರುಮಲ:ತಿರುಪತಿ ಸಮೀಪದ ತಿರುಮಲದಲ್ಲಿರುವ ಪುರಾತನ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಘಾಟ್ ರಸ್ತೆಗಳನ್ನು ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ಸಂಜೆಯಿಂದ ಅನಿರ್ದಿಷ್ಟಾ ವಧಿಗೆ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ.
ಬೆಟ್ಟ-ದೇವಾಲಯಕ್ಕೆ ಹೋಗುವ ಮೆಟ್ಟಿಲನ್ನು ಸಹ ಮುಚ್ಚಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಜತೆಗೆ ವಿಮಾನ ಸಂಚಾರಕ್ಕೂ ತೊಂದರೆಯಾಗಿದೆ.
ಹೈದರಾಬಾದ್ ಮತ್ತು ಬೆಂಗಳೂರಿನಿಂದ ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಎರಡು ಪ್ರಯಾಣಿಕರ ವಿಮಾನಗಳು ಪ್ರತಿಕೂಲ ಹವಾಮಾನ ದಿಂದಾಗಿ ಹಿಂತಿರುಗಬೇಕಾಯಿ ಎಂದು ತಿರುಪತಿ ವಿಮಾನ ನಿಲ್ದಾಣದ ನಿರ್ದೇಶಕ ಎಸ್ ಸುರೇಶ್ ತಿಳಿಸಿದ್ದಾರೆ,
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ನವದೆಹಲಿಯಿಂದ ತಿರುಪತಿಗೆ ವಿಮಾನವನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದರು.