ಸಿಪಿಐ ಸಂಘಟನೆಯ ಉನ್ನತ ನಾಯಕ ಪ್ರಶಾಂತ್ ಬೋಸ್ ಬಂಧನ
ರಾಂಚಿ:ಸಿಪಿಐ(ಮಾವೋವಾದಿ) ಸಂಘಟನೆಯ ಉನ್ನತ ನಾಯಕ ಪ್ರಶಾಂತ್ ಬೋಸ್ ಅಲಿಯಾಸ್ ಕಿಶನ್ ದಾ ನನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಗಿದೆ.
ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ 50 ವರ್ಷಗಳಿಂದ ಸಕ್ರಿಯವಾಗಿದ್ದ ಪ್ರಶಾಂತ್ ಬೋಸ್ ಜೊತೆಗೆ ಅವರ ಪತ್ನಿ ಶೀಲಾ ಮರಾಂಡಿಯನ್ನು ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಇಬ್ಬರ ಪತ್ತೆಯನ್ನು ದೃಢೀಕರಿಸಿಕೊಂಡ ನಂತರ ಇದೀಗ ಇಬ್ಬರ ಬಂಧನವನ್ನು ಪೊಲೀಸರು ಖಚಿತಪಡಿಸಿದ್ದಾರೆ.
ಕಿಶನ್ ದಾ ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಜಾರ್ಖಂಡ್‌ ನಲ್ಲಿ ಕಿಶನ್ ದಾ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಕಿಶನ್ ದಾ ಅವರು ಮಾವೋವಾದಿಗಳ ಪೂರ್ವ ಪ್ರಾದೇಶಿಕ ಬ್ಯೂರೋದ ಕಾರ್ಯದರ್ಶಿಯಾಗಿದ್ದಾರೆ. ಕಿಶನ್ ದಾ ಬಂಗಾಳ, ಒಡಿಶಾ, ಛತ್ತೀಸ್‌ಗಢ, ಅಸ್ಸಾಂ ಮತ್ತು ಇತರ ರಾಜ್ಯಗಳಲ್ಲಿ ದೀರ್ಘಕಾಲ ಸಕ್ರಿಯರಾಗಿದ್ದರು.