12 ಸಾವಿರದ 516 ಕರೋನಾ ಪ್ರಕರಣಗಳು ದೃಢ
ನವದೆಹಲಿ: ಭಾರತದಲ್ಲಿ ಕರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12,516 ಕೊರೋನಾ ಪ್ರಕರಣಗಳು ದೃಢಪಟ್ಟಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,44,14,186ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,62,690ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣ ಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,37,416ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 13,155 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,38,14,080ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 11,89,470 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 61,99,02,064 ಮಂದಿ ಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,10,79,51,225 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.