ಕರೋನಾ ಅಬ್ಬರ ಇಳಿಕೆ: 11,466 ಪ್ರಕರಣಗಳು ದೃಢ
ನವದೆಹಲಿ: ಕರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 11,466 ಕರೋನಾ ಪ್ರಕರಣ ಗಳು ದೃಢಪಟ್ಟಿದ್ದು, 460 ಮಂದಿ ಮೃತಪಟ್ಟಿದ್ದಾರೆ.
ಬುಧವಾರದ ಒಟ್ಟು ಸೋಂಕಿತರ ಸಂಖ್ಯೆ 3,43,88,579ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,61,849ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,39,683ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 11,961 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,37,87,047ಕ್ಕೆ ತಲುಪಿದೆ. ಭಾರತದಲ್ಲಿ ಒಂದೇ ದಿನ 12,78,728 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದ್ದು, 61,85,02,659 ಮಂದಿ ಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 109.63 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.