ದೇಶ್’ಮುಖ್’ಗೆ 14 ದಿನ ನ್ಯಾಯಾಂಗ ಬಂಧನ
ಮುಂಬೈ:ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಮುಂಬೈನ ವಿಶೇಷ ರಜಾ ಕಾಲದ ಕೋರ್ಟ್ ಮಹಾ ರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಶನಿವಾರ ಆದೇಶ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ್’ಮುಖ್ ಅವರನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಒಂಬತ್ತು ದಿನಗಳ ಕಾಲ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಿಕೊಂಡಿತ್ತು. ಆದರೆ ಜಾರಿ ನಿರ್ದೇಶನಾಲಯದ ಮನವಿ ತಿರಸ್ಕರಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ.1ರಂದು ಜಾರಿ ನಿರ್ದೇಶನಾಲಯ ದೇಶ್ ಮುಖ್ ಅವರನ್ನು ಸುಮಾರು 12 ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ ನಂತರ ಬಂಧಿಸಿತ್ತು. ಮಂಗಳವಾರ ವಿಶೇಷ ಕೋರ್ಟ್ ನವೆಂಬರ್ 6ರವರೆಗೆ ಇ.ಡಿ. ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು.
