13,451 ಕರೋನಾ ಪ್ರಕರಣಗಳು ದೃಢ
ನವದೆಹಲಿ: ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿಕೊನೆಗೊಂಡ24 ತಾಸುಗಳ ಅವಧಿಯಲ್ಲಿ ಪಟ್ಟಿದ್ದು, 585 ಮಂದಿ  ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,42,15,653ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,55,653ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣ ಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,62,661ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 14,021 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,35,97,339ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,03,53,25,577 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.