ಕರೋನಾ ಬ್ರೇಕಿಂಗ್: 14,306 ಜನರಲ್ಲಿ ಸೋಂಕು ದೃಢ
ನವದೆಹಲಿ:ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 14,306 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 443 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 454712 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 167695 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 18762 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34567367 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
24 ಗಂಟೆಯಲ್ಲಿ 12,30,720 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,02,27,12,895 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.