ಕರೋನಾ ಅಬ್ಬರ ಇಳಿಕೆ: 15,786 ಪ್ರಕರಣಗಳು ದೃಢ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಅಬ್ಬರ ಇಳಿಕೆಯಾಗುತ್ತಿದೆ. ಶುಕ್ರವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 15,786 ಪ್ರಕರಣ ಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 231 ಮಂದಿ ಮೃತಪಟ್ಟಿದ್ದಾರೆ.
ಶುಕ್ರವಾರದ ಒಟ್ಟು ಸೋಂಕಿತರ ಸಂಖ್ಯೆ 3,41,43,236ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,53,042ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶ ದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 1,75,745ಕ್ಕೆ ತಲುಪಿದೆ.
18,641 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,35,14,449ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ 1,00,59,04,580 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.