ಅಕ್ಟೋಬರ‍್ 2ರವರೆಗೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಸ್ಥಗಿತ
ಅಹಮದಾಬಾದ್‌:ದಕ್ಷಿಣ ಗುಜರಾತ್‌ನಲ್ಲಿ ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ, ಅ.2ರವರೆಗೆ ರಾಜ್ಯದ ಕರಾವಳಿ ಭಾಗದಲ್ಲಿರುವ ಅರಬ್ಬಿ ಸಮುದ್ರದಲ್ಲಿ ಸಂಪೂರ್ಣವಾಗಿ ಮೀನುಗಾರಿಕೆ ಸ್ಥಗಿತಗೊಳಿಸುವಂತೆ ಮೀನುಗಾರರಿಗೆ ಸೂಚನೆ ನೀಡಿದೆ.
ಇದೇ ವೇಳೆ, ಮೀನುಗಾರಿಕೆಗಾಗಿ ಈಗಾಗಲೇ ಸಮುದ್ರಕ್ಕೆ ತೆರಳಿರುವವವರಿಗೆ ಕರಾವಳಿ ತೀರಕ್ಕೆ ಹಿಂದಿರುಗುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗುತ್ತಿದ್ದು, ರಾಜ್ಯದಾದ್ಯಂತ ಮುಂದಿನ ಎರಡು ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.