ಕರೋನಾ ಪ್ರಕರಣದಲ್ಲಿ ಇಳಿಕೆ: 318 ಜನ ಮಹಾಮಾರಿಗೆ ಬಲಿ
ನವದೆಹಲಿ:ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 31,382 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 318 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ ಕೋವಿಡ್ ಗೆ ಮೃತಪಟ್ಟವರ ಸಂಖ್ಯೆ 446368 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 300162 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 32542 ಜನರು ಗುಣಮುಖರಾಗಿದ್ದಾರೆ. ಈವರೆಗೆ 32848273 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 24 ಗಂಟೆಯಲ್ಲಿ 72,20,642 ಜನರಿಗೆ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಈವರೆಗೆ ಒಟ್ಟು 84,15,18,026 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.