ದೇವಸ್ಥಾನಕ್ಕೆ ಪ್ರವೇಶ ಪಡೆಯಲು ನಕಲಿ ಆರ್‌ಟಿಪಿಸಿಆರ್ ಪ್ರಮಾಣಪತ್ರ: 12 ಜನರ ಬಂಧನ
ಪುರಿ:ಜಗನ್ನಾಥ ದೇವಸ್ಥಾನಕ್ಕೆ ಪ್ರವೇಶ ಪಡೆಯಲು ಜನರಿಗೆ ವಿತರಿಸಲೆಂದು ನಕಲಿ ಆರ್‌ಟಿ-ಪಿಸಿಆರ್ ಪ್ರಮಾಣಪತ್ರಗಳನ್ನು ತಯಾರಿಸುತ್ತಿದ್ದ ಆರೋಪದಮೇಲೆ ಪುರಿ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿ, 12 ಜನರನ್ನು ಬಂಧಿಸಿದ್ದಾರೆ.
ಎರಡು ಪ್ರಕರಣಗಳು ಸಿಂಗದ್ವಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೆ, ಇನ್ನೊಂದು ಪ್ರಕರಣ ಹದಿನೈದು ದಿನಗಳ ಅವಧಿಯಲ್ಲಿ ಯಾತ್ರಾಸ್ಥಳದ ಕುಂಭಾರಪದ ಪೊಲೀಸ್ ಠಾಣೆಯಲ್ಲಿ ದಾಖ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಅವರಲ್ಲಿ ಇಬ್ಬರು ಮಧ್ಯಪ್ರದೇಶಕ್ಕೆ ಮತ್ತು ಉಳಿದ ಇಬ್ಬರು ಪುರಿ ಪಟ್ಟಣಕ್ಕೆ ಸೇರಿದವರು. ಇನ್ನೊಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕುಂಭಾರಪದ ಠಾಣೆ ಪೊಲೀಸರು ನಕಲಿ ಆರ್‌ಟಿ-ಪಿಸಿಆರ್ ಪ್ರಮಾಣಪತ್ರವನ್ನು ಬಳಸಿದ ಒಬ್ಬ ಭಕ್ತ ಸೇರಿ ದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ನಕಲಿ ಪ್ರಮಾಣಪತ್ರ ಸೃಷ್ಟಿಸುತ್ತಿದ್ದ ಗ್ಯಾಂಗ್‌ನ ಪ್ರಮುಖ ಆರೋಪಿಗಳು. ನಾಲ್ವರೂ ಪುರಿಗೆ ಸೇರಿದವರು ಎಂದು ಅವರು ಹೇಳಿದ್ದಾರೆ.
ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕೋವಿಡ್-19 ಲಸಿಕೆ ಪಡೆದಿರಬೇಕು ಅಥವಾ ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ 96 ಗಂಟೆಗಳ ಒಳಗಿನ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು (ಆರ್‌ಟಿ-ಪಿಸಿಆರ್) ಸಲ್ಲಿಸುವುದು ಕಡ್ಡಾಯವಾಗಿದೆ.
