ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಿದ 9 ನ್ಯಾಯಮೂರ್ತಿಗಳು
ನವದೆಹಲಿ:ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕವಾದ 9 ಮಂದಿ ಮಂಗಳವಾರ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿ ದ್ದಾರೆ.
ಕರ್ನಾಟಕದ ನ್ಯಾಯಮೂರ್ತಿ ಬಿ.ವಿ ನಾಗರತ್ನ ಪ್ರತಿಜ್ಞಾ ವಿಧಿ ಸ್ವೀಕರಿಸಿದ್ದು, ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನಿಸಿಕೊಂಡಿದ್ದಾರೆ. ಹಾಲಿ ಸಿಜೆಐ ಎನ್.ವಿ.ರಮಣ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯನ್ನಾಗಿಸುವ ಕೊಲಿಜಿಯಂ 9 ಮಂದಿ ನ್ಯಾಯಾಧೀಶರ ನೇಮಕಾತಿ ಕುರಿತಂತೆ ನೀಡಿದ್ದ ಶಿಫಾರಸ್ಸಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು.
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಅಭಯ ಶ್ರೀನಿವಾಸ ಓಕಾ, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಕ್ರಂನಾಥ್, ಸಿಕ್ಕಿಂ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರಕುಮಾರ್ ಮಹೇಶ್ವರಿ, ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹಿಮಾಕೋಹ್ಲಿ, ಕೇರಳ ಹೈಕೋರ್ಟ್‌ನ ನ್ಯಾಯಮೂರ್ತಿ ಸಿ.ಟಿ. ರವಿಕುಮಾರ್, ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಎಂ. ಸುಂದರೇಶ್, ಗುಜರಾತ್ ಹೈಕೋರ್ಟ್‌ನ ಬೇಲಾ ಎಂ. ತ್ರಿವೇದಿ ಮತ್ತು ಹಿರಿಯ ವಕೀಲ ಹಾಗೂ ಮಾಜಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ ಇವರುಗಳು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿಯಾಗಿರುವ ನ್ಯಾ. ಬಿ.ವಿ ನಾಗರತ್ನ ಅವರು ಸಿಜೆಐಯಾಗಿ ಅಲ್ಪಾವಧಿ ಹುದ್ದೆಯಲ್ಲಿರಲಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಬಡ್ತಿ ಪಡೆದು 36 ದಿನಗಳು ಮಾತ್ರ ಮಹತ್ವದ ಹುದ್ದೆಯಲ್ಲಿರಲಿದ್ದಾರೆ.
2027ರ ಸೆಪ್ಟೆಂಬರ್‌ 24ರಿಂದ ಅಕ್ಟೋಬರ್‌ 29ರ ವರೆಗೆ ನ್ಯಾ. ನಾಗರತ್ನ ಸಿಜೆಐ ಹುದ್ದೆಯಲ್ಲಿ ಇರಲಿದ್ದಾರೆ. ನ್ಯಾ. ಓಕಾ ಅವರು 2025ರ ಮೇನಲ್ಲಿ ನಿವೃತ್ತಿ ಹೊಂದಲಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತ ವಯಸ್ಸು 62 ವರ್ಷವಿದ್ದರೆ, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು 65 ವರ್ಷವಾಗಿದೆ.