42,909 ಹೊಸ ಸೋಂಕು ಪ್ರಕರಣಗಳು ಪತ್ತೆ
ನವದೆಹಲಿ:ಕೋವಿಡ್ ಮೂರನೇ ಅಲೆಯ ಭೀತಿಯ ನಡುವೆಯೇ ಸೋಮವಾರ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಅಲ್ಪ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 42,909 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ದೈನಂದಿನ ಪ್ರಕರಣಗಳ ಪೈಕಿ ಶೇ.50ಕ್ಕೂ ಹೆಚ್ಚು ಪ್ರಕರಣಗಳು ಕೇರಳದಲ್ಲಿ ವರದಿಯಾಗಿದ್ದು, ಗರಿಷ್ಠ ಅಂದರೆ 29,836 ಸೋಂಕು ಪ್ರಕರಣಗಳ ಪತ್ತೆಯಾಗಿದೆ.
ಇದೇ ಅವಧಿಯಲ್ಲಿ 34,763 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಗುಣಮುಖರ ಸಂಖ್ಯೆ 3,19,23,405 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 380 ಸೋಂಕಿತರು ಮೃತಪಟ್ಟಿದ್ದು, ಕೋವಿಡ್’ಗೆ ಬಲಿಯಾದವರ ಸಂಖ್ಯೆ 4,38,210ಕ್ಕೆ ಏರಿಕೆಯಾಗಿದೆ.
ಇಲ್ಲಿಯ ವರೆಗೂ ದೇಶದಲ್ಲಿ 52.01 ಕೋಟಿ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 63.43 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.