25,072 ಕೋವಿಡ್‌ ಪ್ರಕರಣಗಳು ದೃಢ
ನವದೆಹಲಿ: ದೇಶದಲ್ಲಿ ಸೋಮವಾರ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 25,072 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 389 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಸೋಂಕಿತರ ಸಂಖ್ಯೆ 3,24,49,306ಕ್ಕೆ ತಲುಪಿದ್ದು, ಮೃತರ ಸಂಖ್ಯೆ 4,34,756ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ತಿಳಿಸಿದೆ. ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,33,924ಕ್ಕೆ ತಲುಪಿದೆ.
44,157 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,16,80,626ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 58,25,49,595 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.