28,204 ಕೋವಿಡ್‌ ಪ್ರಕರಣಗಳು ದೃಢ
ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಏರಿಳಿತ ಮುಂದುವರೆದಿದೆ. ಮಂಗಳವಾರ ಬೆಳಗ್ಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 28,204 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕಳೆದ 147 ದಿನಗಳಲ್ಲೇ ದಾಖಲಾದ ಕನಿಷ್ಠ ಸಂಖ್ಯೆಯಾಗಿದೆ. 373 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.
ಒಟ್ಟು ಸೋಂಕಿತರ ಸಂಖ್ಯೆ 3,19,98,158ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,28,628ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,88,508ಕ್ಕೆ ತಲುಪಿದೆ.
41,511 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,11,80,968ಕ್ಕೆ ತಲುಪಿದೆ.

