ಪ್ರಮಾಣವಚನ ಸ್ವೀಕರಿಸಿದ ಎ.ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ
ನವದೆಹಲಿ :ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ 2.0 ವಿಸ್ತರಣೆಯಾಗಿದೆ. ನೂತನ ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ ನೂತನ ಸಚಿವರಾಗಿ ಸಂಸದ ಎ.ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಹಾಗೂ ಶೋಭಾ ಕರಂದ್ಲಾಜೆ ಅವರು ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟಕ್ಕೆ ನೂತನ ಸಚಿವರಾಗಿ 43 ಸಚಿವರು ಸೇರ್ಪಡೆ ಗೊಳ್ಳುತ್ತಿದ್ದಾರೆ. ಕರ್ನಾಟಕದಿಂದ ಸಂಸದ ರಾಜೀವ್ ಚಂದ್ರಶೇಖರ್ ಅವರಿಗೂ ಸ್ಥಾನ ದೊರೆತಿದೆ. ನೂತನ ಕೇಂದ್ರ ಸಚಿವರಾಗಿ ಸಂಸದ ಎ ನಾರಾಯಣಸ್ವಾಮಿ, ರಾಜೀವ್ ಚಂದ್ರಶೇಖರ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಕಾಶ್ ಜಾವಡೇಕರ್ ಮತ್ತು ರವಿಶಂಕರ್ ಪ್ರಸಾದ್ ರಾಜೀನಾಮೆಯಿಂದ ಈವರೆಗೆ ಒಟ್ಟು 12 ಸಚಿವರು ಮೋದಿ ಸಂಪುಟದಿಂದ ನಿರ್ಗಮಿಸಿದ್ದಾರೆ. ಆರೋಗ್ಯ ಕಾರಣಗಳಿಂದಾಗಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಇಷ್ಟವಿಲ್ಲ ಎಂದು ವ್ಯಕ್ತಪಡಿಸಿದರು. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಬುಧವಾರ ಕೇಂದ್ರ ಸಚಿವ ಸಂಪುಟದಿಂದ ನಿರ್ಗಮಿಸಿದರು.
ರಾಜೀನಾಮೆ ಸಲ್ಲಿಸಿದ 12 ಕೇಂದ್ರ ಸಚಿವರ ಪಟ್ಟಿ ಇಂತಿದೆ.