  :  ಕೇಸ್‌ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಸಂದೀಪ್‌ ಘೋಷ್‌ಗೆ ಮುಖಭಂಗ
ನವದೆಹಲಿ:ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ(   ) ನಡೆದ ಕೋಲ್ಕತ್ತಾದ ಆರ್‌ಜಿ ಕರ್‌ ಮೆಡಿಕಲ್‌ ಕಾಲೇಜಿನ(  ) ಮಾಜಿ ಪ್ರಾಂಶುಪಾಲ ಡಾ. ಸಂದೀಪ್‌ ಘೋಷ್‌( ) ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಕಾಲೇಜಿನಲ್ಲಿ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ಸಂದೀಪ್‌ ಘೋಷ್‌ ಸಿಬಿಐ ವಿಚಾರಣೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಘೋಷ್‌ ಅರ್ಜಿಯನ್ನು ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್( ) ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಘೋಷ್‌ ಅವರ ಮನವಿಯನ್ನು ತಿರಸ್ಕರಿಸಿದೆ. ಅಲ್ಲದೇ ಆರೋಪಿಯಾಗಿ, ಕಲ್ಕತ್ತಾ ಹೈಕೋರ್ಟ್ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಪಿಐಎಲ್‌ನಲ್ಲಿ ಮಧ್ಯಪ್ರವೇಶಿಸಲು ಸ್ಥಾನವಿಲ್ಲ ಎಂದು ಪೀಠ ಹೇಳಿದೆ.
ಘೋಷ್ ಅವರ ಅಧಿಕಾರಾವಧಿಯಲ್ಲಿ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಘೋಷ್‌ ಅವರ ಹೆಸರು ದಾಖಲಾಗಿತ್ತು.ಅದಾಗಿ ಕೆಲವು ದಿನಗಳ ನಂತರ ಈ ಬಂಧನ ನಡೆದಿದೆ.
ಆಗಸ್ಟ್ 9 ರಂದು ಆರ್‌ಜಿ  ಕಾರ್ ಆಸ್ಪತ್ರೆಯ ಸ್ನಾತಕೋತ್ತರ ತರಬೇತಿ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಘೋಷ್ ಅವರನ್ನು ಸಿಬಿಐನ ಸಾಲ್ಟ್ ಲೇಕ್ ಕಚೇರಿಯಲ್ಲಿ 15 ನೇ ದಿನವೂ ಪ್ರಶ್ನಿಸಲಾಗಿತ್ತು. ನಂತರ  ಸಿಬಿಐನ ಭ್ರಷ್ಟಾಚಾರ ವಿರೋಧಿ ವಿಭಾಗವನ್ನು ಹೊಂದಿರುವ ಕೋಲ್ಕತ್ತಾದ ನಿಜಾಮ್ ಪ್ಯಾಲೇಸ್ ಕಚೇರಿಗೆ ಕರೆದೊಯ್ದು  ಅವರನ್ನು ಬಂಧಿಸಲಾಗಿದೆ ಎಂದು ಪ್ರಕಟಿಸಿದೆ.
ಕಲ್ಕತ್ತಾ ಹೈಕೋರ್ಟ್ ನಿರ್ದೇಶನದ ಮೇರೆಗೆ ದಾಖಲಾದ ಎಫ್ಐಆರ್‌ನಲ್ಲಿ , ತನಿಖಾ ಸಂಸ್ಥೆ ಘೋಷ್ ಮತ್ತು ಕೋಲ್ಕತ್ತಾ ಮೂಲದ ಮೂರು ಖಾಸಗಿ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಿದೆ.
ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬಿಐ ಆಗಸ್ಟ್ 25 ರಂದು ಘೋಷ್ ಅವರ ಕೋಲ್ಕತ್ತಾದ ಬೆಲಿಯಾಘಾಟಾ ನಿವಾಸದಲ್ಲಿ ಒಂದು ದಿನದ ಶೋಧ ಕಾರ್ಯಾಚರಣೆ ನಡೆಸಿತ್ತು. ಆಗಸ್ಟ್ 9 ರಂದು ಮುಂಜಾನೆ ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ  31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯರ ಅತ್ಯಾಚಾರ ಮತ್ತು ಕೊಲೆಯ ಬಗ್ಗೆಯೂ ಸಂಸ್ಥೆ ತನಿಖೆ ನಡೆಸುತ್ತಿದೆ.
ಆರ್‌ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲರು ಮತ್ತು ಇತರರ ಅಧಿಕಾರಾವಧಿಯಲ್ಲಿ ನಡೆದ ಹಣಕಾಸು ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಜಾರಿ ನಿರ್ದೇಶನಾಲಯವು  ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣ ದಾಖಲಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಇತ್ತೀಚೆಗೆ ಭಾರತೀಯ ವೈದ್ಯಕೀಯ ಸಂಘ ಸಂದೀಪ್ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸಿತ್ತು.
ಈ ಸುದ್ದಿಯನ್ನೂ ಓದಿ:  : ಕೋಲ್ಕತ್ತಾ ಆರ್‌.ಜಿ.ಕರ್‌ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮನೆ ಮೇಲೆ ಇಡಿ ದಾಳಿ