ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ ನಿಧನ
ನವದೆಹಲಿ: ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ (68) ಶುಕ್ರವಾರ ದೆಹಲಿಯಲ್ಲಿ ವಿಧಿವಶರಾದರು.
ಕೋವಿಡ್‌-19 ಸಂಬಂಧಿಸಿದ ಕಾರಣಗಳಿಂದಾಗಿ ಸಾವು ಸಂಭವಿಸಿರಬಹುದೆಂದು ಹೇಳಲಾಗುತ್ತಿದೆ. ಸಿನ್ಹಾ ಅವರಿಗೆ ಕರೋನಾ ವೈರಸ್‌ ಸೋಂಕು ತಗುಲಿರುವುದು ಗುರುವಾರ ರಾತ್ರಿ ದೃಢಪಟ್ಟಿತ್ತು.
1974ನೇ ಬ್ಯಾಚ್‌ ಬಿಹಾರ ಕೇಡರ್‌ನ ಐಪಿಎಸ್‌ ಅಧಿಕಾರಿ (ನಿವೃತ್ತ) ಸಿನ್ಹಾ ಹಲವು ಪ್ರಮುಖ ಸ್ಥಾನಗಳ ಜವಾಬ್ದಾರಿ ನಿರ್ವಹಿಸಿ ದ್ದಾರೆ. ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
2012ರಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕವಾಗುವುದಕ್ಕೂ ಮುನ್ನ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್‌) ಮುಖ್ಯಸ್ಥರಾಗಿ, ಸಿಬಿಐನ ಪಾಟ್ನಾ ಮತ್ತು ದೆಹಲಿಯಲ್ಲಿ ಹಲವು ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು.