ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಗ್ಯ ಸ್ಥಿರ
ಮುಂಬೈ:ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ತಿಳಿಸಿದರು.
ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಶರದ್‌‌ ಅವರನ್ನು ಭಾನುವಾರ ದಾಖಲಿಸಲಾಗಿತ್ತು. ಗ್ಯಾಲ್ ಬ್ಲಾಡರ್ ಸರ್ಜರಿ ನಡೆದಿದೆ. ಡಾ.ಬಲ್ಸಾರ್‌ ಅವರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಸದ್ಯ ಪವಾರ್‌ ಅವರ ಆರೋಗ್ಯದ ಪರಿಸ್ಥಿತಿ ಸ್ಥಿರವಾಗಿದೆ ಎಂದು ಮಲಿಕ್‌ ಹೇಳಿದರು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ
://../