ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್’ಗೆ ಕೋವಿಡ್ ಪಾಸಿಟಿವ್‌
ಲಖನೌ:ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೋನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಪರೀಕ್ಷೆಯಲ್ಲಿ ಕೋವಿಡ್‌-19 ಪಾಸಿಟಿವ್‌ ಇರುವುದು ಪತ್ತೆಯಾಗಿದೆ ಎಂದಿದ್ದಾರೆ.
ವಿಶೇಷ ಕರ್ತವ್ಯದಲ್ಲಿರುವ ಅಧಿಕಾರಿ ಅಭಿಷೇಕ್ ಕೌಶಿಕ್ ಸೇರಿದಂತೆ ಸಿಎಂ ಕಚೇರಿಯ ಕೆಲವು ಅಧಿಕಾರಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಯೋಗಿ ಆದಿತ್ಯನಾಥ್ ಅವರು ಪ್ರತ್ಯೇಕ ವಾಸದಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಅವರಿಗೆ ಕೋವಿಡ್‌ ದೃಢಪಟ್ಟಿದೆ.
ಪರೀಕ್ಷೆಯಲ್ಲಿ ಕೋವಿಡ್‌ ಪಾಸಿಟಿವ್‌ ಇರುವುದು ಪತ್ತೆಯಾಗಿದೆ. ನಾನು ಪ್ರತ್ಯೇಕ ವಾಸದಲ್ಲಿದ್ದು, ವೈದ್ಯರ ಸಲಹೆಯಂತೆ ಮುಂದು ವರಿದಿದ್ದೇನೆ. ಎಲ್ಲ ಕಾರ್ಯಗಳನ್ನು ವರ್ಚ್ಯುವಲ್‌ ಆಗಿ ನಡೆಸುತ್ತಿದ್ದೇನೆ’ ಎಂದು ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ
://../