ಅಬ್ಬರಿಸಿದ ಕರೋನಾ: 1,52,879 ಕರೋನಾ ಪ್ರಕರಣ ಪತ್ತೆ
ನವದೆಹಲಿ:ದೇಶದಲ್ಲಿ ಕರೋನಾ ಅಬ್ಬರಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,52,879 ಕರೋನಾ ಪ್ರಕರಣ ವರದಿಯಾಗಿದೆ.
ಬರೋಬ್ಬರಿ 839 ಮಂದಿ ಬಲಿಯಾಗಿದು, ಒಟ್ಟು ಮೃತಪಟ್ಟವರ ಸಂಖ್ಯೆ 1,69,275 ಹಾಗೂ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,08,087ಕ್ಕೆ ಏರಿಕೆಯಾಗಿದೆ. ಒಂದೇ ದಿನ 1,52,879 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,33,58,805ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 10,15,95,147ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ
://../