ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ನಿಧನ
ಮುಂಬೈ:ಕೋವಿಡ್‌ ನಂತರದ ಸಮಸ್ಯೆಗಳಿಂದ ಬಳಲುತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ರಾವ್‌ಸಾಹೇಬ್‌ ಅಂತಪುರ್ಕರ್‌ ಅವರು (64) ನಿಧನರಾದರು. ನಾಂದೇಡ್ ಜಿಲ್ಲೆಯ ದೇಗ್ಲೂರ್‌ ವಿಧಾನಸಭೆ ಕ್ಷೇತ್ರದಿಂದ ಎರಡನೇ ಬಾರಿ ಆಯ್ಕೆಯಾಗಿದ್ದರು.
ರಾವ್‌ಸಾಹೇಬ್‌ ಅಂತಪುರ್ಕರ್‌ ಕೋವಿಡ್ ನಂತರ ಕಾಣಿಸಿಕೊಂಡಿದ್ದ ಆರೋಗ್ಯ ಸಂಬಂಧಿ ತೊಂದರೆಗಳಿಗಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ಮೃತಪಟ್ಟರು ಎಂದು ಮೂಲಗಳು ಶನಿವಾರ ತಿಳಿಸಿವೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ ಏ.1ರಿಂದ ವೆಂಟಿಲೇಟರ್‌ ನೆರವು ನೀಡಲಾಗಿತ್ತು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ
://../