ಬಿಜೆಪಿ ಸೇರ್ಪಡೆಯಾಗಲಿದ್ದಾರೆ  ಬಾಲಿವುಡ್ ನಟ ಮಿಥುನ್‌ ಚಕ್ರವರ್ತಿ ?
ಕೋಲ್ಕತ್ತಾ :ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರ ಕಣ ರಂಗೇರುತ್ತಿದ್ದು,  ಬೃಹತ್ ಸಮಾವೇಶದಲ್ಲಿ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯಾ ಅವರು ಮಿಥುನ್ ಮನೆಗೆ ಭೇಟಿ ನೀಡಿದ್ದಾರೆ.
ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ಇಂದು ಪಶ್ಚಿಮ ಬಂಗಾಳದಲ್ಲಿ ದೊಡ್ಡ ಪ್ರಮಾಣದಲ್ಲಿ ಸಮಾವೇಶ ನಡೆಯಲಿದ್ದು, ಸುಮಾರು 7 ಲಕ್ಷ ಮಂದಿ ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ.