ಪುಲ್ವಾಮಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ
ಶ್ರೀನಗರ:ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಬುಧವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಅಪರಿಚಿತ ಭಯೋತ್ಪಾದಕರು ಹತ್ಯೆಗೊಂಡಿದ್ದಾರೆ.
ಪುಲ್ವಾಮ ಜಿಲ್ಲೆಯ ಟಿಕನ್ ಪ್ರದೇಶದಲ್ಲಿ ಬುಧವಾರ ಬೆಳಗ್ಗಿನ ಜಾವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆದಿತ್ತು.