 : ಪಂಜಾಬ್‌ & ಸಿಂಧ್ ಬ್ಯಾಂಕ್‌ನಲ್ಲಿದೆ 213 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಬೆಂಗಳೂರು:ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಪಂಜಾಬ್‌ & ಸಿಂಧ್ ಬ್ಯಾಂಕ್‌ (   ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (     2024). 213 ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆ ಇದಾಗಿದ್ದು, ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ದಿನ ಸೆಪ್ಟೆಂಬರ್‌ 15. ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ ( ).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಆಫೀಸರ್‌- 56 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಪದವಿ, ಸ್ನಾತಕೋತ್ತರ ಪದವಿ, ಎಂಸಿಎ, ಸ್ನಾತಕೋತ್ತರ ಪದವಿಮ್ಯಾನೇಜರ್‌ – 117 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್ಎ, ಎಫ್ಆರ್‌ಎಂ, ಸಿಎಐಐಬಿ, ಪದವಿ, ಬಿಇ ಅಥವಾ ಬಿ.ಟೆಕ್‌, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಬಿಎ, ಪಿಜಿಡಿಬಿಎಂ, ಪಿಜಿಡಿಎಂ, ಎಂಸಿಎ, ಎಂ.ಎಸ್‌ಸಿ, ಸ್ನಾತಕೋತ್ತರ ಪದವಿ, ಎಂ.ಟೆಕ್‌, ಎಂ.ಎಸ್.ಸೀನಿಯರ್‌ ಮ್ಯಾನೇಜರ್‌ – 33 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್ಎ, ಎಫ್ಆರ್‌ಎಂ, ಸಿಎಐಐಬಿ, ಸಿಎಸ್, ಬಿ.ಎಸ್‌ಸಿ, ಎಲ್ಎಲ್‌ಬಿ, ಪದವಿ, ಬಿಇ ಅಥವಾ ಬಿ.ಟೆಕ್‌, ಪದವಿ, ಪಿಜಿಡಿಬಿಎ, ಪಿಜಿಡಿಎಂ, ಪಿಜಿಡಿಬಿಎಂ, ಎಂಬಿಎ, ಎಂಸಿಎ, ಎಂ.ಎಸ್‌ಸಿ, ಸ್ನಾತಕೋತ್ತರ ಪದವಿ, ಎಂ.ಟೆಕ್‌, ಎಂ.ಎಸ್.ಚೀಫ್‌ ಮ್ಯಾನೇಜರ್‌ – 7 ಹುದ್ದೆ, ವಿದ್ಯಾರ್ಹತೆ: ಸಿಎ, ಬಿ.ಎಸ್‌ಸಿ, ಬಿಇ ಅಥವಾ ಬಿ.ಟೆಕ್‌, ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪಿಜಿಡಿಬಿಎಂ, ಎಂ.ಎಸ್‌ಸಿ, ಎಂಸಿಎ, ಸ್ನಾತಕೋತ್ತರ ಪದವಿ
ವಯೋಮಿತಿ
ಸಡಿಲಿಕೆ
ಮೀಸಲಾತಿಗೆ ಅನುಗುನವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ (ಎನ್‌ಸಿಎಲ್‌) ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು 850 ರೂ., ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌:..inಗೆ ಭೇಟಿ ನೀಡಿ.
