ಜಡೇಜಾಗೆ ಮೊಣಕಾಲಿನ ಗಾಯ: ಅಕ್ಷರ್ ಬದಲಿ ಆಟಗಾರ
ನವದೆಹಲಿ :ಏಷ್ಯಾಕಪ್‌ನಲ್ಲಿ ರವೀಂದ್ರ ಜಡೇಜಾ ಅವರ ಬದಲಿ ಆಟಗಾರ ನಾಗಿ ಅಕ್ಷರ್ ಪಟೇಲ್ ಅವರನ್ನ ಹೆಸರಿಸಿದೆ.
ರವೀಂದ್ರ ಜಡೇಜಾ ಬಲ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು, ಟೂರ್ನಿ ಯಿಂದ ಹೊರಗುಳಿದಿದ್ದಾರೆ. ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಏಷ್ಯಾಕಪ್‌ಗೆ ಭಾರತ ತಂಡ ಇಂತಿದೆ :ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಆರ್.ಅಶ್ವಿನ್, ಯಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಆವೇಶ್ ಖಾನ್.