ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ದ ಸರಣಿ: ವೇಳಾಪಟ್ಟಿ ಪ್ರಕಟ
ಏಷ್ಯಾಕಪ್​ ಗೂ ಮುನ್ನ ಟೀಮ್ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳ ಲಿದ್ದು, ಈ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ವಿರುದ್ದ ಸರಣಿ ಆಡಲು ತೆರಳುತ್ತಿದೆ. ಆದರೆ ಈ ಸರಣಿಯಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಹೀಗಾಗಿ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುವ ನಿರೀಕ್ಷೆಯಿದೆ.
ಸರಣಿಯು ಐಸಿಸಿ ವಿಶ್ವಕಪ್ ಸೂಪರ್ ಲೀಗ್‌ನ ಭಾಗವಾಗಿದ್ದು, ಪಂದ್ಯಗಳು ಜಿಂಬಾಬ್ವೆ ಪಾಲಿಗೆ ಬಹಳ ಮಹತ್ವದ್ದಾಗಿದೆ. ಏಕೆಂದರೆ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಹೆಚ್ಚಿನ ಅಂಕಗಳನ್ನು ಪಡೆದರೆ, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50-ಓವರ್‌ಗಳ ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯಬಹುದು.
ಮಹೇಂದ್ರ ಸಿಂಗ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಆಡಿತ್ತು. ಈ ಎರಡೂ ಸರಣಿಯಲ್ಲಿ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿತ್ತು.
ಭಾರತ-ಜಿಂಬಾಬ್ವೆ ಸರಣಿ ವೇಳಾಪಟ್ಟಿ
ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸರಣಿಗೂ ಮುನ್ನ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ದ 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನು ಆಡಲಿದೆ.
ವೆಸ್ಟ್ ಇಂಡೀಸ್ ವಿರುದ್ದದ ಸರಣಿಯ ವೇಳಾಪಟ್ಟಿ ಹೀಗಿದೆ:
ಏಕದಿನ ಸರಣಿ ವೇಳಾಪಟ್ಟಿ:
ಟಿ20 ಸರಣಿ ವೇಳಾಪಟ್ಟಿ: