ಭಾರತ – ಇಂಗ್ಲೆಂಡ್: ಎರಡನೇ ಏಕದಿನ ಪಂದ್ಯ ಇಂದು
ಲಾರ್ಡ್ಸ್:ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಏಕದಿನ ಪಂದ್ಯ ಗುರುವಾರ ನಡೆಯಲಿದ್ದು ಲಂಡನ್​ನ ಲಾರ್ಡ್​​ ಮೈದಾನದಲ್ಲಿ ಆಯೋಜಿಸ ಲಾಗಿದೆ.
ಪ್ರಥಮ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಜೋಡಿ ಅಜೇಯ ಶತಕದ ಜೊತೆಯಾಟ ಆಡಿತ್ತು. ಹಿಟ್​​ಮ್ಯಾನ್ ಅರ್ಧಶತಕ ಸಿಡಿಸಿ ಮಿಂಚಿದ್ದರೆ, ಧವನ್ ಉತ್ತಮ ಸಾಥ್ ನೀಡಿದ್ದರು. ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬಂದರೆ ಶ್ರೇಯಸ್ ಅಯ್ಯರ್ ಹೊರಗುಳಿಯಲಿದ್ದಾರೆ. ಕೊಹ್ಲಿ ಅಲಭ್ಯರಾದರೆ ಅಯ್ಯರ್​ಗೆ ಮತ್ತೊಂದು ಅವಕಾಶ ಸಿಗಲಿದೆ. ಸೂರ್ಯಕುಮಾರ್ ಯಾದವ್ ನಾಲ್ಕನೇ ಸ್ಥಾನಕ್ಕೆ ಫಿಟ್ ಆಗಿದ್ದಾರೆ.
ವಿಕೆಟ್ ಕೀಪರ್  – ಬ್ಯಾಟರ್ ರಿಷಭ್ ಪಂತ್ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಆಲ್ರೌಂಡರ್ ಜವಾಬ್ದಾರಿಯನ್ನು ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ವಹಿಸಿ ಕೊಳ್ಳುವುದು ಖಚಿತ.
ಬೌಲಿಂಗ್ ವಿಭಾಗದಲ್ಲಿ ಭಾರತ ಒಂದು ಬದಲಾವಣೆ ಮಾಡುವ ನಿರೀಕ್ಷೆಯಿದೆ. ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಕಳೆದ ಪಂದ್ಯದಲ್ಲಿ ಮಾರಕವಾಗಿದ್ದರು. ಇಂಗ್ಲೆಂಡ್ ಬ್ಯಾಟರ್​ಗಳನ್ನು ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್​ಗೆ ಅಟ್ಟಿದ್ದರು. ಹೀಗಾಗಿ ಆಡುವ ಬಳಗದಲ್ಲಿ ಇರಲಿದ್ದಾರೆ.
ಪ್ರಸಿದ್ಧ್ ಕೃಷ್ಣ ಜಾಗದಲ್ಲಿ ಶಾರ್ದೂಲ್ ಥಾಕೂರ್ ಅಥವಾ ಮೊಹಮ್ಮದ್ ಸಿರಾಜ್​​ ಆಡುವ ಸಾಧ್ಯತೆ ಇದೆ. ಲಾರ್ಡ್ಸ್‌ ಕ್ರೀಡಾಂಗಣದ ಪಿಚ್ ಮೊದಲಿನಿಂದಲೂ ಸ್ವಿಂಗ್ ಎಸೆತಗಳಿಗೆ ಹೆಚ್ಚು ನೆರವು ನೀಡುವ ಗುಣ ಹೊಂದಿದೆ. ಇಲ್ಲಿ 70 ಏಕದಿನ ಪಂದ್ಯಗಳು ನಡೆದಿವೆ.
ಆಂಗ್ಲರ ತಂಡದಲ್ಲಿ ಬೆನ್​ ಸ್ಟೋಕ್ಸ್​, ಜೋ ರೂಟ್​, ಬೈರ್​ಸ್ಟೋರಂತಹ ಬಲಿಷ್ಠ ಆಟಗಾರರಿದ್ದರು ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್ ವೈಫಲ್ಯ ಸರಿಪಡಿಸಿಕೊಂಡರೆ, ಜಯಿಸುವ ಆಸೆ ಈಡೇರಬಹುದು. ಬೌಲಿಂಗ್​ನಲ್ಲಿ ಹ್ಯಾರಿ ಬ್ರೂಕ್ ಮತ್ತು ಪಿಲ್ ಸಲ್ಟ್ ಎರಡು ಆಯ್ಕೆಗಳಿದ್ದು ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡರೆ ಅಚ್ಚರಿಪಡಬೇಕಿಲ್ಲ.
ಭಾರತ ಪ್ಲೇಯಿಂಗ್ :
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಮೊಹಮ್ಮದ್ ಶಮಿ, ಜಸ್​​ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್.