  : ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ಅಶ್ವಿನ್‌
ಚೆನ್ನೈ:ಬಾಂಗ್ಲಾದೇಶ(  ) ವಿರುದ್ಧದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಶತಕ ಬಾರಿಸಿ ಹಲವು ದಾಖಲೆ ನಿರ್ಮಿಸಿದ್ದ ಟೀಮ್‌ ಇಂಡಿಯಾದ ಅನುಭವಿ ಹಾಗೂ ಹಿರಿಯ ಸ್ಪಿನ್ನರ್‌ ಆರ್‌. ಅಶ್ವಿನ್‌( ) ಇದೀಗ ಬೌಲಿಂಗ್‌ ಮೂಲಕವೂ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಬಾಂಗ್ಲಾ ವಿರುದ್ಧ ದ್ವಿತೀಯ ಇನಿಂಗ್ಸ್‌ನಲ್ಲಿ 2 ವಿಕೆಟ್‌ ಕೀಳುವ ಮೂಲಕ ಆಸ್ಟ್ರೇಲಿಯಾದ ವೇಗಿ ಪ್ಯಾಟ್‌ ಕಮಿನ್ಸ್‌( ) ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಅಶ್ವಿನ್‌ 2 ವಿಕೆಟ್‌ ಕೀಳುತ್ತಿದ್ದಂತೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಕೂಟದಲ್ಲಿ ಅತ್ಯಧಿಕ ವಿಕೆಟ್‌ ಕಿತ್ತ ವಿಶ್ವದ 2ನೇ ಬೌಲರ್‌ ಎನಿಸಿಕೊಂಡರು. ಅಶ್ವಿನ್‌ ಸದ್ಯ 176* ವಿಕೆಟ್‌ ಕೆಡವಿದ್ದಾರೆ. ಪ್ಯಾಟ್‌ ಕಮಿನ್ಸ್‌ 42 ಟೆಸ್ಟ್ ಪಂದ್ಯಗಳಿಂದ 175 ವಿಕೆಟ್ ಕಿತ್ತಿದ್ದಾರೆ. ಅತ್ಯಧಿಕ ವಿಕೆಟ್‌ ಕಿತ್ತ ದಾಖಲೆ ಆಸೀಸ್‌ ಸ್ಪಿನ್ನರ್‌ ನಥನ್‌ ಲಿಯೋನ್‌ ಹೆಸರಿನಲ್ಲಿದೆ. 43 ಟೆಸ್ಟ್ ಪಂದ್ಯಗಳಿಂದ 187 ವಿಕೆಟ್‌ಗಳನ್ನು ಕಬಳಿಸಿದ್ದಾರೆ.
 .3 @ashwinravi99👏👏  ,     @. –://./jV4wK7BgV2…#@../Gp79wUjMEk
ಮೊದಲ ಇನಿಂಗ್ಸ್‌ನಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಶ್ವಿನ್ 133 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 11 ಬೌಂಡರಿ ಸಹಿತ 113 ರನ್ ಬಾರಿಸಿದ್ದರು. ಈ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಮೈದಾನದಲ್ಲಿ 2 ಶತಕ ಹಾಗೂ ಮೂರಕ್ಕಿಂತ ಹೆಚ್ಚು ಬಾರಿ 5 ವಿಕೆಟ್ ಪಡೆದ ಏಕೈಕ ಆಟಗಾರ ಎಂಬ ವಿಶ್ವ ದಾಖಲೆಯನ್ನು ಆರ್​. ಅಶ್ವಿನ್​ ತಮ್ಮದಾಗಿಸಿಕೊಂಡಿದ್ದರು.
ಇದನ್ನೂ ಓದಿ  : ಕೊಹ್ಲಿಯ ದಾಖಲೆ ಮುರಿದ ಶುಭಮನ್‌ ಗಿಲ್‌
ಟೆಸ್ಟ್ ಕ್ರಿಕೆಟ್​ನಲ್ಲಿ 8ನೇ ಕ್ರಮಾಂಕ ಅಥವಾ ಅದಕ್ಕಿಂತ ಕೆಲ ಕ್ರಮಾಂಕದಲ್ಲಿ ಆಡಲಿಳಿದು ಅತ್ಯಧಿಕ ಶತಕ ಸಿಡಿಸಿದ ವಿಶ್ವ ದಾಖಲೆ ಸರಿಗಟ್ಟಲು ಅಶ್ವಿನ್​ಗೆ ಇನ್ನು ಒಂದು ಶತಕದ ಅವಶ್ಯಕತೆಯಿದೆ. ಈ ಪಟ್ಟಿಯಲ್ಲಿ ಕಿವೀಸ್‌ನ ಮಾಜಿ ಆಟಗಾರ ಡೇನಿಯಲ್ ವೆಟ್ಟೋರಿ ಅಗ್ರಸ್ಥಾನದಲ್ಲಿದ್ದಾರೆ. ಅಶ್ವಿನ್‌ ಕಾನ್ಪುರ ಟೆಸ್ಟ್‌ನಲ್ಲಿ ಈ ದಾಖಲೆ ಮುರಿಯುವ ಅವಕಾಶವಿದೆ. 38 ರ ಹರಯದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು 20-ಪ್ಲಸ್ ಅರ್ಧಶತಕಗಳ ಜತೆಗೆ 30 ಪ್ಲಸ್ ಐದು ವಿಕೆಟ್‌ಗಳನ್ನು ದೀರ್ಘ ಸ್ವರೂಪದ ಕ್ರಿಕೆಟ್ ನಲ್ಲಿ ಗಳಿಸಿದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.
ಶುಭಮನ್‌ ಗಿಲ್‌ 176 ಎಸೆತಗಳಿಂದ 10 ಬೌಂಡರಿ ಮತ್ತು 4 ಸಿಕ್ಸರ್‌ ಸಿಡಿಸಿ ಅಜೇಯ 119ರನ್‌ ಬಾರಿಸಿದರು. ಇದು ಗಿಲ್‌ ಅವರ 5ನೇ ಟೆಸ್ಟ್‌ ಶತಕವಾಗಿದೆ. ಈ ಶತಕದೊಂದಿಗೆ ಶುಭಮನ್‌ ಗಿಲ್‌ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಕೂಟದಲ್ಲಿ ಅತ್ಯಧಿಕ ಶತಕ ಬಾರಿಸಿದ 2ನೇ ಭಾರತೀಯ ಬ್ಯಾಟರ್‌ ಎನಿಸಿಕೊಂಡಿದ್ದಾರೆ. ಇದುವರೆಗೆ ಈ ದಾಖಲೆ ಕಿಂಗ್‌ ಖ್ಯಾತಿಯ ವಿರಾಟ್‌ ಕೊಹ್ಲಿ(4 ಶತಕ) ಹೆಸರಿನಲ್ಲಿತ್ತು. ಅಗ್ರಸ್ಥಾನದಲ್ಲಿ ನಾಯಕ ರೋಹಿತ್‌ ಶರ್ಮ ಕಾಣಿಸಿಕೊಂಡಿದ್ದಾರೆ. ರೋಹಿತ್‌ 9 ಶತಕ ಬಾರಿಸಿದ್ದಾರೆ. ಒಟ್ಟಾರೆ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನ ಇಂಗ್ಲೆಂಡ್‌ನ ಜೋ ರೂಟ್‌ಗೆ ಸಲ್ಲುತ್ತದೆ. ರೂಟ್‌ 16 ಶತಕ ಬಾರಿಸಿದ್ದಾರೆ.